ಜೆಡಿಎಸ್ ಇಂಧನ ಖಾತೆ ಬಿಟ್ಟುಕೊಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

D-K-Shivakumar--01
ಬೆಂಗಳೂರು, ಜೂ.6-ಈಗಾಗಲೇ ಕಾಂಗ್ರೆಸ್‍ನಿಂದ ಸಚಿವರಾಗುತ್ತಿರುವವರ ಪಟ್ಟಿ ರಾಜಭವನಕ್ಕೆ ತಲುಪಿದೆ. ಜೆಡಿಎಸ್ ಇಂಧನ ಖಾತೆ ಬಿಟ್ಟುಕೊಟ್ಟಿರುವ ಮಾಹಿತಿ ತಮಗಿಲ್ಲ ಎಂದು ಶಾಸಕ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಪಟ್ಟಿಯನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ. ಆ ಮೂಲಕ ರಾಜಭವನಕ್ಕೂ ಪಟ್ಟಿ ತಲುಪಿದೆ ಎಂದರು.

ಇಂಧನ ಖಾತೆಯನ್ನು ಬಿಟ್ಟುಕೊಟ್ಟಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಕೆಲವೊಂದು ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ತಿಳಿಸಲು ಆಗಿಲ್ಲ. ಯಾರೂ ಬೇಸರಪಟ್ಟುಕೊಳ್ಳಬೇಡಿ. ಕಾರ್ಯಕ್ರಮದಲ್ಲಿ ಕುರ್ಚಿ ಸಿಗದೆ ಇದ್ದರೂ ಅಸಮಾಧಾನ ಮಾಡಿಕೊಳ್ಳುವುದು ಬೇಡ ಎಂದು ತಿಳಿಸಿದರು. ದಿನೇಶ್‍ಗುಂಡೂರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುತ್ತಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Facebook Comments

Sri Raghav

Admin