ಎಂಟಿಬಿಗೆ ಕೈ ತಪ್ಪಿದ ಸಚಿವ ಸ್ಥಾನ, ತಾ.ಪಂ-ಜಿ.ಪಂ. ಸದಸ್ಯರ ರಾಜೀನಾಮೆಗೆ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

ಹೊಸಕೋಟೆ, ಜೂ.6-ಬೆಂಗಳೂರು ಗ್ರಾಮಾಂತರ ಹೊಸಕೋಟೆ ಶಾಸಕ ಎಂ.ಬಿ.ಟಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳಲ್ಲಿ ಆಕ್ರೋಶ ಮುಗಿಲುಮುಟ್ಟಿದೆ. ತಾಲೂಕು ಪಂಚಾಯ್ತಿ , ಜಿಲ್ಲಾ ಪಂಚಾಯ್ತಿ ಕಾಂಗ್ರೆಸ್ ಸದಸ್ಯರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೊಸಕೋಟೆ ತಾ.ಪಂ.ನ 16, ಜಿ.ಪಂ.ನ ಮೂವರು ಸದಸ್ಯರು ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಟಯರ್‍ಗೆ ಬೆಂಕಿ ಹಚ್ಚಿ ಎಂಟಿಬಿ ನಾಗರಾಜ್ ಅಭಿಮಾನಿಗಳು, ತಾ.ಪಂ.-ಜಿ.ಪಂ. ಸದಸ್ಯರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್‍ವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಯಿತು.
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ನಾಗರಾಜ್ ಅವರಿಗೆ ಸಚಿವ ಸ್ಥಾನ ಕೊಡದೆ ಕಾಂಗ್ರೆಸ್ ಹೈಕಮಾಂಡ್ ವಂಚಿಸಿದೆ. ಹಾಗಾಗಿ ನಾವು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಸದಸ್ಯರು ಪತ್ರಿಕೆಗೆ ತಿಳಿಸಿದ್ದಾರೆ.

MTB

Facebook Comments

Sri Raghav

Admin