ಬಂಗಾರಪೇಟೆ ನಿಲ್ದಾಣದಲ್ಲಿ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Train--Suicide--01
ಬಂಗಾರಪೇಟೆ,ಜೂ.6- ಬಂಗಾರಪೇಟೆ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ರೈಲಿಗೆ ಸಿಕ್ಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಮಾರು 40 ವರ್ಷದ ವ್ಯಕ್ತಿ ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಮಾರಿಕುಪ್ಪಂ ಬಂಗಾರಪೇಟೆ ಪ್ಯಾಸೆಂಜರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಸುದ್ದಿ ತಿಳಿದ ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin