ಸರ್ವರಿಗೂ ಕೈಗೆಟುಕುವ ಆರೋಗ್ಯ ಆರೈಕೆ ಕೇಂದ್ರದ ಗುರಿ : ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Modi--Conf

ನವದೆಹಲಿ, ಜೂ.7-ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ ಒದಗಿಸುವುದು ಕೇಂಧ್ರ ಸರ್ಕಾರದ ಹೆಗ್ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ಫಲಾನುಭವಿಗಳೊಂದಿಗೆ ಇಂದು ವಿಡಿಯೋ ಕಾನ್ಪೆರೆನ್ಸ್ ಸಂವಾದ ನಡೆಸಿದ ಅವರು, ಬಡವರು ಮತ್ತು ಆರ್ಥಿಕ ದುರ್ಬಲರಿಗೆ ಔಷಧಿಗಳನ್ನು ತಲುಪಿಸುವ ವಿಚಾರ ದೊಡ್ಡ ಕಳವಳಕ್ಕೆ ಕಾರಣವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ಅತ್ಯಂತ ಕಡಿಮೆ ದರದಲ್ಲಿ ಆರೋಗ್ಯ ಆರೈಕೆ ಸೇವೆಗಳನ್ನು ಒದಗಿಸಲು ತಮ್ಮ ಸರ್ಕಾರ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಕಡಿಮೆ ಬೆಲೆಗೆ ಔಷಧಿಗಳನ್ನು ಒದಗಿಸುವ ಕೇಂದ್ರ ಸರ್ಕಾರದ ಪಿಎಂಬಿಜೆಪಿ ಯೋಜನೆಯಿಂದ ಲಕ್ಷಾಂತರ ಜನರು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮೋದಿ ಹೇಳಿದರು. ಕೇಂದ್ರ ಸರ್ಕಾರವು ಹೃದ್ರೋಗಿಗಳಿಗೆ ಜೀವರಕ್ಷಕವಾದ ಸ್ಟೆಂಟ್ ದರಗಳನ್ನು ಗಣನೀಯವಾಗಿ ಇಳಿಸಿದೆ. ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಉಪಯುಕ್ತವಾಗಿದೆ ಎಂದು ಪ್ರಧಾನಿ ತಿಳಿಸಿದರು.

ಜಾಗತಿಕವಾಗಿ ನಿಗದಿಗೊಳಿಸಲಾದ ಗಡುವಿಗೆ ಐದು ವರ್ಷಗಳ ಮುನ್ನವೇ ಅಂದರೆ 2025ರ ವೇಳೆಗೆ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಅವರು ನುಡಿದರು.  ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ. ದೇಶದ ಎಲ್ಲರೂ ಯೋಗಾಭ್ಯಾಸ ಮಾಡಬೇಕು ಹಾಗೂ ಅದನ್ನು ತಮ್ಮ ಜೀವನದ ಒಂದು ಭಾಗವನ್ನಾಗಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.

Facebook Comments

Sri Raghav

Admin