ಬಿಎಸ್‍ವೈ ಹೆಲಿಕಾಪ್ಟರ್ ವೆಚ್ಚ ಕುರಿತು ಸಿಎಂ ನೀಡಿದ ಪ್ರತಿಕ್ರಿಯೆ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--And-Yadiyurapp
ಬೆಂಗಳೂರು, ಜೂ.7- ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಂದ ನಮಗೆ ಯಾವುದೇ ಪತ್ರ ಬಂದಿಲ್ಲ. ಸರ್ಕಾರದ ಹಣ ದುಂದು ವೆಚ್ಚ ಹಾಗಬಾರದು ಎಂದು ಹೆಲಿಕಾಪ್ಟರ್ ಪ್ರಯಾಣದ ವೆಚ್ಚವನ್ನು ಉಲ್ಲೇಖಿಸಲಾಗಿತ್ತು. ತಾವು ದೆಹಲಿಗೆ ವಿಶೇಷ ವಿಮಾನದಲ್ಲಿ ಹೋಗಿ ಬಂದಿದ್ದರೆ 40 ಲಕ್ಷ ರೂ. ಖರ್ಚಾಗುತ್ತಿತ್ತು.

ಆದರೆ, ಸಾಮಾನ್ಯ ವಿಮಾನದಲ್ಲಿ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬಂದಿದ್ದು, ಆ ವಿಚಾರವನ್ನಷ್ಟೇ ಪ್ರಸ್ತಾಪ ಮಾಡಲಾಗಿತ್ತು. ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡುವುದು ಬೇಡ ಎಂದು ಹೇಳಿದಷ್ಟೇ. ದುಂದು ವೆಚ್ಚ ಕಡಿಮೆ ಮಾಡುವ ಬಗ್ಗೆ ಹೇಳಿಕೆ ನೀಡಲಾಗಿತ್ತು. ಯಡಿಯೂರಪ್ಪ ಅವರನ್ನು ಟೀಕೆ ಮಾಡುವ ಉದ್ದೇಶದಿಂದಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin