ಬ್ಯಾಂಕ್‍ನಿಂದ ಡ್ರಾ ಮಾಡಿಕೊಂಡು ಹೋಗುತ್ತಿದ್ದ 1ಲಕ್ಷ ರೂ. ದರೋಡೆ

ಈ ಸುದ್ದಿಯನ್ನು ಶೇರ್ ಮಾಡಿ

Robbery-01

ಬೆಂಗಳೂರು, ಜೂ.8-ಬ್ಯಾಂಕ್‍ನಿಂದ ಒಂದು ಲಕ್ಷ ರೂ. ಡ್ರಾ ಮಾಡಿಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ಹಣವಿದ್ದ ಬ್ಯಾಗನ್ನು ಎಗರಿಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭವಾನಿ ಎಂಬುವರು ನಿನ್ನೆ ಮಧ್ಯಾಹ್ನ 3.30ರಲ್ಲಿ ಬ್ಯಾಂಕ್‍ನಿಂದ ಒಂದು ಲಕ್ಷ ಹಣ ಡ್ರಾ ಮಾಡಿ ಬ್ಯಾಗ್‍ನಲ್ಲಿಟ್ಟುಕೊಂಡು ಮೇಡರಹಳ್ಳಿಯಲ್ಲಿ ನಡೆದುಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಇವರನ್ನು ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಹಣವಿದ್ದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಸಹಾಯಕ್ಕಾಗಿ ಭವಾನಿಯವರು ಕೂಗಿಕೊಂಡರಾದರೂ ಪ್ರಯೋಜನವಾಗಿಲ್ಲ. ಕೆ.ಆರ್.ಪುರ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಶೋಧ ಕೈಗೊಂಡಿದ್ದಾರೆ.

Facebook Comments