ಖಾಸಗಿ ಬಸ್‍ನೊಳಗೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಜೂ.1- ಖಾಸಗಿ ಬಸ್‍ನೊಳಗೆ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ತಿಕ್ (22) ಆತ್ಮಹತ್ಯೆ ಮಾಡಿಕೊಂಡಿರುವ ಬಸ್ ಚಾಲಕ. ಚಿಕ್ಕಮಂಡ್ಯ ಗ್ರಾಮದ ಶನಿದೇವರ ದೇವಸ್ಥಾನ ಬಳಿ ಈತ ರಾತ್ರಿ ಮಿನಿಬಸ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Bus-Suidie

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇಂದು ಬೆಳಗ್ಗೆ ಬಸ್ ಹತ್ತಲು ಪ್ರಯಾಣಿಕರು ಒಳಗೆ ಹೋದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin