ವಿಧಾನಪರಿಷತ್‍ ಚುನಾವಣೆ : ಜೂ.12ರಂದು ಮತಎಣಿಕೆ, ನಿಷೇಧಾಜ್ಞೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

 

Counting--01ಬೆಂಗಳೂರು,ಜೂ.9-ಕರ್ನಾಟಕ ವಿಧಾನಪರಿಷತ್‍ನ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಜೂ.12ರಂದು ನಡೆಯಲಿದ್ದು, ಅಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮತ ಎಣಿಕೆ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್ ಆದೇಶಿಸಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸರ್ಕಾರಿ ರಾಮ್ ನಾರಾಯಣ್ ಚಲ್ಲಾರಾಮ್ ಕಾಲೇಜಿನ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮೆರವಣಿಗೆ ಮತ್ತು ಸಭೆಗಳನ್ನು ನಿಷೇಧಿಸಿದೆ.   ಕಾನೂನು ಭಂಗ ಮಾಡುವ ಉದ್ದೇಶದಿಂದ 5 ಅಥವಾ ಹೆಚ್ಚು ಜನರ ಗುಂಪು ಸೇರಬಾರದು ಹಾಗೂ ಮಾರಕಾಸ್ತ್ರಗಳನ್ನಿಡಿದುಕೊಂಡು ಓಡಾಡಬಾರದು, ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದಲೂ ಖಾಸಗಿ ಆಸ್ತಿ, ಪಾಸ್ತಿಗಳಿಗೆ ನಷ್ಟ ಉಂಟು ಮಾಡುವ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಿದೆ.

Facebook Comments

Sri Raghav

Admin