ಸಮ್ಮಿಶ್ರ ಸರ್ಕಾರ ಯಾವ ಕ್ಷಣದಲ್ಲಾದರೂ ಪತನವಾಗಬಹುದು : ಈಶ್ವರಪ್ಪ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa
ಬೇಲೂರು, ಜೂ.10- ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಯಾವ ಕ್ಷಣದಲ್ಲಾದರೂ ಬೀಳ ಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಾಲಯಕ್ಕೆ ಮಾರಿಕಾಂಬ ಮೈಕ್ರೋ ಫೈನಾನ್ಸ್‍ನ ಸ್ತ್ರೀಶಕ್ತಿ ಸಂಘದ ಸದಸ್ಯರೊಂದಿಗೆ ಮಳೆಯ ನಡುವೆಯೆ ಭೇಟಿನೀಡಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಸಮ್ಮಿಶ್ರ ಸರ್ಕಾರ ಗೊಂದಲದಿಂದ ಕೂಡಿದ ಸರ್ಕಾರವಾಗಿದೆ. ಜನರ ಹಿತ ಕಾಯಬೇಕಾದವರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ. ಈ ಸರ್ಕಾರ ಯಾವ ಕ್ಷಣದಲ್ಲಿ ಬೇಕಾದರೂ ಬಿಳುತ್ತದೆ. ಇಂತಹ ಸರ್ಕಾರದಿಂದ ಜನರು ಯಾವುದೇ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.

ಶಿವಮೊಗ್ಗದಲ್ಲಿ ಸುಮಾರು ನಾಲ್ಕು ಸಾವಿರಕ್ಕು ಹೆಚ್ಚು ಸದಸ್ಯರನ್ನು ಹೊಂದಿರುವ ಮಾರಿಕಾಂಬ ಮೈಕ್ರೋ ಫೈನಾನ್ಸ್‍ನ ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಇತರರಿಗೆ ಫೈನಾನ್ಸ್‍ನಿಂದ 24 ಸಾವಿರ ಕೋಟಿ ಸಾಲ ನೀಡಿದ್ದು, ಅವರು ಮರು ಪಾವತಿಸುವ ಹಣದಿಂದ ಬಂದ ಲಾಭದಲ್ಲಿ ಪ್ರತಿ ಎರೆಡು ವರ್ಷಕ್ಕೊಮ್ಮೆ ಸಂಘದ ಸದಸ್ಯರಿಗೆ ಅದೇ ರೀತಿ ಈ ಬಾರಿ ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಿಗೆ ಎಂಬತ್ತಕ್ಕೂ ಹೆಚ್ಚು ಬಸ್‍ಗಳಲ್ಲಿ ಸದಸ್ಯರ ಪ್ರವಾಸ ಹಮ್ಮಿಕೊಂಡಿದ್ದು, ಅವರಿಗೆ ಊಟ, ವಸತಿ ಸೇರಿದಂತೆ ಯಾವುದೆ ಸೌಲಭ್ಯದ ಕೊರತೆ ಇಲ್ಲದಂತೆ ಪ್ರವಾಸ ಹಮ್ಮಿ ಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಚ್.ಕೆ.ಸುರೇಶ್, ಸಂತೋಷ್, ಅರುಣ್‍ಕುಮಾರ್ ಮತ್ತಿತರರಿದ್ದರು.

Facebook Comments

Sri Raghav

Admin