6 ಸಚಿವ ಸ್ಥಾನ ತಕ್ಷಣ ಭರ್ತಿಗೆ ರಾಹುಲ್ ಜೊತೆ ಚರ್ಚೆಗೆ ಮುಂದಾದ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Kharge-Rahul

ಬೆಂಗಳೂರು, ಜೂ.10-ದೋಸ್ತಿ ಸರ್ಕಾರದಲ್ಲಿ ಭುಗಿಲೆದ್ದಿರುವ ಸಚಿವ ಆಕಾಂಕ್ಷಿಗಳ ಅತೃಪ್ತಿಯನ್ನು ಶಮನಗೊಳಿಸುವ ಪ್ರಯತ್ನಗಳು ಮುಂದುವರಿದಿರುವಾಗಲೇ ಲೋಕಸಭೆಯಲ್ಲಿ ಕಾಂಗ್ರೆಸ್ ಸಭಾ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಭಿನ್ನಮತಕ್ಕೆ ತೇಪೆ ಹಾಕಲು ಮುಂದಾಗಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮಂಜೂರಾಗಿರುವ ಸ್ಥಾನಗಳಲ್ಲಿ ಬಾಕಿ ಉಳಿದಿರುವ ಉಳಿದ ಆರು ಸಚಿವ ಸ್ಥಾನಗಳನ್ನು ಕೂಡಲೇ ಭರ್ತಿ ಮಾಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹಿರಿಯ ಧುರೀಣ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮುಂದೆ ಏನಾಗುತ್ತದೋ ನೋಡೋಣ. ನಾನು ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸುತ್ತೇನೆ. ನಮ್ಮ ಸಚಿವ ಆಕಾಂಕ್ಷಿಗಳಲ್ಲಿ ಉದ್ಭವಿಸಿರುವ ಭಿನ್ನಮತ ತಡೆಯಲು ಉಳಿದ ಆರು ಮಂತ್ರಿ ಸ್ಥಾನಗಳನ್ನು ತಕ್ಷಣ ಭರ್ತಿ ಮಾಡುವಂತೆ ನಾನು ಮಾತನಾಡುತ್ತೇನೆ ಎಂದು ಖರ್ಗೆ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ನಮಗೆ ಮಂತ್ರಿ ಸ್ಥಾನ ನೀಡದಿರುವ ಬಗ್ಗೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆಗಳನ್ನು ನೀಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಖರ್ಗೆ ನೀಡಿರುವ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Facebook Comments

Sri Raghav

Admin