ಬೆಂಗಳೂರಿನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ 4 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Train-Suicide
ಬೆಂಗಳೂರು, ಜೂ.12- ನಗರದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಸಿಟಿ ರೈಲ್ವೆ: ಕೆಂಗೇರಿ-ಹೆಜ್ಜಾಲ ರೈಲ್ವೆ ನಿಲ್ದಾಣದ ಮಧ್ಯೆ ಹಾದು ಹೋಗುವ ನೈಸ್ ರಸ್ತೆ ಬ್ರಿಡ್ಜ್ ಸಮೀಪ ಚಲಿಸುತ್ತಿದ್ದ ರೈಲಿನಿಂದ ಹಾರಿ ಚನ್ನಪಟ್ಟಣ ಮೂಲದ, ಆಟೋ ಚಾಲಕ ಕೋದಂಡ (30) ಎಂಬುವವರು ಸಾವನ್ನಪ್ಪಿದ್ದಾರೆ.
ಚನ್ನಪಟ್ಟಣ : ಮತ್ತೊಂದು ಪ್ರಕರಣದಲ್ಲಿ ಇಂದು ಮುಂಜಾನೆ ಚನ್ನಪಟ್ಟಣ-ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣದ ಮಧ್ಯೆ 18 ವರ್ಷದ ಬಾಲಕ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದು, ಈತನ ಹೆಸರು-ವಿಳಾಸ ತಿಳಿದುಬಂದಿಲ್ಲ.
ಯಶವಂತಪುರ ರೈಲ್ವೆ: ನಿನ್ನೆ ಬೆಳಗ್ಗೆ ಚಿಕ್ಕಬಾಣವಾರ ರೈಲ್ವೆ ನಿಲ್ದಾಣ ಸಮೀಪ ದಾವಣಗೆರೆ ಮೂಲದ ಸುನಿಲ್ (23) ಎಂಬಾತ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಂಟೌನ್‍ಮೆಂಟ್: ವೈಟ್‍ಫೀಲ್ಡ್-ಹೂಡಿ ರೈಲ್ವೆ ನಿಲ್ದಾಣದ ಮಧ್ಯೆ ಹಾದು ಹೋಗುವ ರೈಲ್ವೆ ಹಳಿ ದಾಟುತ್ತಿದ್ದ ಸುಮಾರು 45 ವರ್ಷದ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಇವರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿಡಲಾಗಿದೆ. ಈ ಪ್ರಕರಣಗಳನ್ನು ಆಯಾ ರೈಲ್ವೆ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin