ಏಕಕಾಲಕ್ಕೆ ವಿಧಾನಪರಿಷತ್ ಪ್ರವೇಶಿಸಿ ಸಹೋದರರ ದಾಖಲೆ

ಈ ಸುದ್ದಿಯನ್ನು ಶೇರ್ ಮಾಡಿ

Vidhanaparishat-Brothers

ಬೆಂಗಳೂರು, ಜೂ.13- ಮಾಜಿ ಶಾಸಕ ಎಸ್.ಆರ್.ಲಕ್ಷ್ಮಯ್ಯ ಅವರ ಪುತ್ರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ಅವರು ಮೇಲ್ಮನೆಗೆ ಚುನಾಯಿತರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಧರ್ಮೇಗೌಡ ಜೆಡಿಎಸ್ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಭೋಜೇಗೌಡ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದಾರೆ. ಈ ಇಬ್ಬರು ಸಹೋದರರು ಏಕಕಾಲಕ್ಕೆ ವಿಧಾನಪರಿಷತ್ ಪ್ರವೇಶ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ಸಹೋದರರಿಬ್ಬರು ಏಕಕಾಲಕ್ಕೆ ವಿಧಾನಪರಿಷತ್‍ಗೆ ಆಯ್ಕೆಯಾಗುವ ಮೂಲಕ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆಯನ್ನು ನಿರ್ಮಾಣ ಮಾಡಿದ್ದಾರೆ. ರಾಜ್ಯ ವಿಧಾನಪರಿಷತ್‍ನ ಇತಿಹಾಸದಲ್ಲಿ ಅಣ್ಣತಮ್ಮಂದಿರಿಬ್ಬರು ಒಟ್ಟಿಗೆ ಒಂದೇ ಅವಧಿಯಲ್ಲಿ ಚುನಾಯಿತರಾಗಿರುವುದು ಬಹುಶಃ ಇದೇ ಮೊದಲು ಎನ್ನಲಾಗಿದೆ.

Facebook Comments

Sri Raghav

Admin