ಜಯನಗರದ ಸೋಲಿನ ಬಗ್ಗೆ ಯಡಿಯ್ತೋರಪ್ಪ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01
ಬೆಂಗಳೂರು, ಜೂ.13-ಇಂದಿನ ಜಯನಗರ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ಅವರು ನಾವು ಜನರ ತೀರ್ಪನ್ನು ಗೌರವಿಸುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ನಿರೀಕ್ಷೆ ನಮ್ಮಲ್ಲಿತ್ತು. ಆದರೆ ಗೆಲುವಿನ ಸಮೀಪಕ್ಕೆ ಬಂದು ಸೋತಿದ್ದಾರೆ. 2013ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ನಮಗೆ 9 ಸಾವಿರ ಮತಗಳು ಹೆಚ್ಚುವರಿಯಾಗಿ ಬಂದಿದ್ದು, ಇದರಿಂದ ನಾವು ಧೃತಿಗೆಡುವುದಿಲ್ಲ ಎಂದರು. ಇದರಿಂದ ಪಕ್ಷ ಸಂಘಟನೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜನರ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin