ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಅಪ್ಪ-ಮಗ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Electrick-Shok--01
ಮಂಡ್ಯ,ಜೂ.14- ಜಮೀನಿಗೆ ತೆರಳಿದ್ದ ಅಪ್ಪ-ಮಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಹೆಮ್ಮಿಗೆ ಗ್ರಾಮದ ಕರಗುಂಡೇಗೌಡ(65) ಹಾಗೂ ಸತೀಶ್(32) ಮೃತಪಟ್ಟ ಅಪ್ಪ-ಮಗ. ಜಮೀನಿನ ಬಳಿ ನಿರ್ಮಿಸಿದ್ದ ರೇಷ್ಮೆ ಸಾಕಾಣಿಕೆ ಮನೆಯಲ್ಲಿ ರೇಷ್ಮೆ ಹುಳಕ್ಕೆ ಸೊಪ್ಪು ಹಾಕಲು ಅಪ್ಪ-ಮಗ ಹೋಗಿದ್ದರು.ಈ ವೇಳೆ ವಿದ್ಯುತ್ ಸ್ಪರ್ಶವಾದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ವಿದ್ಯುತ್ ಸರಬರಾಜು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin