ಐಎಎಸ್ ಅಧಿಕಾರಿಗಳ ಮುಷ್ಕರ ನಿಲ್ಲಿಸಲು ಪ್ರಧಾನಿ ಮಧ್ಯಸ್ಥಿಕೆಗೆ ಕೇಜ್ರಿವಾಲ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Kejriwal

ನವದೆಹಲಿ, ಜೂ.14-ಐಎಎಸ್ ಅಧಿಕಾರಿಗಳ ಮುಷ್ಕರವನ್ನು ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ. ಈ ಬಿಕ್ಕಟ್ಟು ನಿಭಾಯಿಸಲು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸಚಿವರ ಸಭೆಗಳಿಗೆ ಅಧಿಕಾರಿಗಳು ಹಾಜರಾಗಿಲ್ಲ. ಇವರ ಮುಷ್ಕರದಿಂದ ಸರ್ಕಾರದ ಕೆಲಸ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಕೇಜ್ರಿವಾಲ್ ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಐಎಎಸ್ ಅಧಿಕಾರಿಗಳ ಕಾನೂನು ಬಾಹಿರ ಮುಷ್ಕರದಿಂದ ಮುಂಗಾರು ಮಳೆಗೆ ಮುನ್ನ ಚರಂಡಿಗಳ ಸ್ವಚ್ಚತೆ, ಮೊಹಲ್ಲಾಗಳಲ್ಲಿ ಕ್ಲಿನಿಕ್‍ಗಳ ಸ್ಥಾಪನೆ, ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ವಿಫಲವಾಗಿವೆ ಎಂದು ಅವರು ಆರೋಪಿಸಿದ್ದಾರೆ.  ಮುಷ್ಕರ ನಿಲ್ಲಿಸಲು ಐಎಎಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂಬದೂ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೆಫ್ಟಿನೆಂಟ್ ಗೌರ್ನರ್ ಕಚೇರಿಯಲ್ಲಿ ಅರವಿಂದ್ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳು ಏರಡು ದಿನಗಳ ಅಹೋರಾತ್ರಿ ಧರಣಿ ಮುಂದುವರಿಸಿದ್ದರು.

Facebook Comments

Sri Raghav

Admin