ಐಎಎಸ್ ಅಧಿಕಾರಿಗಳ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

IAS
ಬೆಂಗಳೂರು, ಜೂ.15- ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿ-2 ತುಷಾರ್ ಗಿರಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ನಿಯೋಜನೆಯಿಂದ ಹಿಂದೆ ಇರುವ ಹಿರಿಯ ಐಎಎಸ್ ಅಧಿಕಾರಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

Facebook Comments

Sri Raghav

Admin