ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ 7 ಕೋಟಿ ಆಸ್ತಿ ನಷ್ಟ..!

ಈ ಸುದ್ದಿಯನ್ನು ಶೇರ್ ಮಾಡಿ

Rain-Effect

ಚಿಕ್ಕಮಗಳೂರು, ಜೂ.15- ಶೃಂಗೇರಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೀಡಾಗಿರುವ ಪ್ರದೇಶಗಳಿಗೆ ಶಾಸಕ ಸಿ.ಡಿ. ರಾಜೇಗೌಡ, ಜಿಲ್ಲಾಧಿಕಾರಿ ಶ್ರೀರಂಗಯ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದುವರೆಗೂ ಜಿಲ್ಲೆಯಲ್ಲಿ ಮಳೆಯಿಂದ 7 ಕೋಟಿ ರೂ. ಗಳಿಗೂ ಹೆಚ್ಚು ಹಾನಿ ಉಂಟಾಗಿದ್ದು, ಹಾನಿ ಬಗ್ಗೆ ಮತ್ತಷ್ಟು ವಿವರಗಳನ್ನು ಸಂಬಂಧಿಸಿದ ಅಧಿಕಾರಿಗಳಿಂದ ತರಿಸಿಕೊಳ್ಳಲಾಗುತ್ತಿದೆ. 18 ಮನೆಗಳಿಗೆ ಮಳೆಯಿಂದ ಹಾನಿಯಾಗಿದ್ದು, ತಲಾ 10 ಸಾವಿರದಂತೆ 10 ಮನೆಗಳಿಗೆ ಪರಿಹಾರ ನೀಡಲಾಗಿದೆ. ಸಮೀಕ್ಷೆ ನಡೆಸಿ ಉಳಿದವುಗಳಿಗೂ ಪರಿಹಾರ ನೀಡಲಾಗುವುದು ಎಂದು ಡಿಸಿ ಶ್ರೀರಂಗಯ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದುವರೆಗೂ ಒಂಬತ್ತು ಜಾನು ವಾರುಗಳು ಮಳೆಯಿಂದ ಮೃತಪಟ್ಟಿದ್ದು, ಏಳು ಜಾನು ವಾರುಗಳ ಮಾಲೀಕರಿಗೆ ಪರಿಹಾರ ನೀಡಲಾಗಿದೆ. ಮೂಡಿಗೆರೆ, ಶೃಂಗೇರಿ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಹಾನಿಯಾಗಿದ್ದು, ಚರಂಡಿ, ಸೇತುವೆಗಳಿಗೆ ಹಾನಿಯಾಗಿ 5 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಹೇಳಿದರು. ವಿದ್ಯುತ್ ಮಾರ್ಗಗಳ ಮೇಲೆ ಮರ ಬಿದ್ದು ಮೆಸ್ಕಾಂ ಇಲಾಖೆಗೆ 2 ಕೋಟಿಯಷ್ಟು ನಷ್ಟ ಉಂಟಾಗಿದೆ. ಕಳೆದ ಐದು ದಿನಗಳಿಂದ ಮಲೆನಾಡು ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮಳೆ ಪ್ರಮಾಣ ಕಡಿಮೆ ಆದ ಮೇಲೆ ವಿದ್ಯುತ್ ಮಾರ್ಗಗಳನ್ನು ರಿಪೇರಿ ಮಾಡಲಾಗುವುದು ಎಂದರು.

ಕೊಪ್ಪ-ಶೃಂಗೇರಿ ಭಾಗದಲ್ಲಿ ಅಡಿಕೆ, ಬಾಳೆ ತೋಟಗಳಲ್ಲಿ ನೀರು ನಿಂತು 5 ಲಕ್ಷ ರೂ. ಹಾನಿ ಉಂಟಾಗಿರುವ ಬಗ್ಗೆ ವರದಿ ಬಂದಿದೆ. ಇನ್ನೂ ಕೆಲವು ಭಾಗಗಳಿಗೆ ಹಾನಿ ಉಂಟಾಗಿದ್ದು, ಅದರ ವರದಿಗಳನ್ನು ತರಿಸಿಕೊಳ್ಳ ಲಾಗುತ್ತಿದೆ. ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಜಂಟಿ ಪರಿಶೀಲನೆ ನಡೆಸಿ ಪರಿಹಾರ ನಿಗದಿಪಡಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.228ರಷ್ಟು ಹೆಚ್ಚು ಮಳೆ ಯಾಗಿದೆ. ಜಿಲ್ಲೆಯ ಬಯಲು ಸೀಮೆ ಭಾಗವಾದ ಕಡೂರು, ತರೀಕೆರೆ ತಾಲೂಕಿನಲ್ಲಿ ವಾಡಿಕೆ ಗಿಂತ ಶೇ.150ರಷ್ಟು ಹೆಚ್ಚು ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಯಿಂದ ಯಾವುದೇ ಅವಘಡ ಉಂಟಾಗದಂತೆ ಕಂದಾಯ, ಪೆÇಲೀಸ್ ಇಲಾಖೆ ಅಧಿಕಾರಿ ಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ತುಂಗಾ-ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ನದಿ ಪಾತ್ರಗಳಲ್ಲಿ ವಾಸಿಸುವ ಪ್ರದೇಶಗಳಿಗೆ ನೀರು ನುಗ್ಗುವ ಸೂಚನೆ ಇದ್ದು, ಈ ಬಗ್ಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಿವಾಸಿಗಳಿಗೆ ಮುನ್ಸೂಚನೆ ನೀಡಿರುವುದಾಗಿ ಹೇಳಿದರು. ಮಳೆ ಅಬ್ಬರಕ್ಕೆ ಕಳಸ, ಶೃಂಗೇರಿಯ ಕೆಲ ಗ್ರಾಮಗಳು ದ್ವೀಪದಂತಾಗಿವೆ. ಇಂದು ಮಳೆ ಕೊಂಚ ಬಿಡುವು ಕೊಟ್ಟಿರು ವುದರಿಂದ ಮಳೆಯ ವಾಸ್ತವ ಸ್ಥಿತಿ ಅರಿತು ಏನೇನು ಕ್ರಮ ಕೈಗೊಳ್ಳಬಹುದೋ ಆ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ಮಾಡಲಿದೆ ಎಂದರು. ಶಾಸಕ ರಾಜೇಗೌಡ ಮಾತನಾಡಿ, ಮಳೆಹಾನಿಯಿಂದ ಉಂಟಾಗಿರುವ ಚರಂಡಿ, ರಸ್ತೆ ದುರಸ್ತಿ ಸೇರಿದಂತೆ ಸಾರ್ವಜನಿಕರಿಗಾಗಿರುವ ಹಾನಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Facebook Comments

Sri Raghav

Admin