ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ ..!

ಈ ಸುದ್ದಿಯನ್ನು ಶೇರ್ ಮಾಡಿ

Police-Escape

ಮಂಡ್ಯ ,ಜೂ.15-ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಾಲೆಗೆ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಡ್ಯದ ಮಧು(24) ಮೃತಪಟ್ಟ ವ್ಯಕ್ತಿ. ನಗರದ ಹೊರವಲಯದ ಚಿಕ್ಕೇಗೌಡನದೊಡ್ಡಿಯಲ್ಲಿ ರಾತ್ರಿಯಿಂದ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಇಂದು ಬೆಳಗಿನ ಜಾವ ದಾಳಿ ನಡೆಸಿದಾಗ ಜೂಜಾಟದಲ್ಲಿ ತೊಡಗಿದ್ದ ಮಧು ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಮೀಪದ ಹೆಬ್ಬಾಳ ನಾಲೆಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದಾನೆ.

ಬೆಳಗಿನಿಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮಧು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು. ಶವ ಪತ್ತೆಯಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.  ಈ ಸಂಬಂಧ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin