ಪತಿಯನ್ನು ಕಟ್ಟಿಹಾಕಿ ಆತನ ಕಣ್ಣೆದುರೇ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಗ್ಯಾಂಗ್ ರೇಪ್…!

ಈ ಸುದ್ದಿಯನ್ನು ಶೇರ್ ಮಾಡಿ

Rape--01

ಗಯಾ, ಜೂ.15-ಮೂರು ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಕಣ್ಣ ಮುಂದೆಯೇ 45 ವರ್ಷದ ಪತ್ನಿ ಮತ್ತು 14ರ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ವ್ಯಕ್ತಿಯೊಬ್ಬರ ಬೈಕ್‍ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ಗೌರುರು ಪ್ರದೇಶದಿಂದ ಹತ್ತಿರದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದರು. ಕೊಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಭತ್ತು ಮಂದಿ ದುಷ್ಟರ ತಂಡವೊಂದು ಅವರನ್ನು ಅಡ್ಡಗಟ್ಟಿ 2,000 ರೂ.ನಗದು ಮತ್ತು ಚಿನ್ನಾಭರಣಗಳನ್ನು ಲೂಟಿ ಮಾಡಿತು.

ನಂತರ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಮೂವರು ಪತ್ನಿ ಮತ್ತು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾದರು. ಇದಕ್ಕೂ ಮುನ್ನ ಇದೇ ಮಾರ್ಗದಲ್ಲಿ ಇಬ್ಬರು ಬೈಕ್ ಸವಾರರನ್ನು ಇದೇ ತಂಡ ಸುಲಿಗೆ ಮಾಡಿ ಅವರಿಬ್ಬರನ್ನು ಮರಕ್ಕೆ ಕಟ್ಟಿ ಹಾಕಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Facebook Comments

Sri Raghav

Admin