ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಜೂ.16- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ (ಜೂ.17ರಿಂದ) 12 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ . ಇಂದು ಸಂಜೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಪಯಣ ಬೆಳೆಸಲಿರುವ ಸಿದ್ದರಾಮಯ್ಯ ಅವರು ನಂತರ ಧರ್ಮಸ್ಥಳಕ್ಕೆ ತೆರಳುವರು. ಸ್ಥಳೀಯ ಕಾಂಗ್ರೆಸ್ ಮುಖಂಡರ ಭೇಟಿ ನಂತರ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜೂ.28 ಅಥವಾ 29ರವರೆಗೆ ಅವರು ಇಲ್ಲಿ ತಂಗಲಿದ್ದಾರೆ. ರಕ್ತದೊತ್ತಡ ಸೇರಿದಂತೆ ವಯೋ ಸಹಜ ಕೆಲವು ಸಮಸ್ಯೆಗಳಿಗೆ ಆಯುರ್ವೇದ ಚಿಕಿತ್ಸೆ , ವ್ಯಾಯಾಮ , ಪಥ್ಯ ಸೇರಿದಂತೆ ಹಲವು ಚಿಕಿತ್ಸೆ ಪಡೆಯಲಿದ್ದಾರೆ.

Facebook Comments

Sri Raghav

Admin