ತುಟ್ಟಿಭತ್ಯೆ ಪ್ರಸ್ತಾವನೆಗೆ ಸಿಎಂ ಅನುಮೋದನೆ : ಸರ್ಕಾರಿ ನೌಕರರ ಸಂಘದ ಕೃತಜ್ಞತೆ

ಈ ಸುದ್ದಿಯನ್ನು ಶೇರ್ ಮಾಡಿ

Salary--01

ಬೆಂಗಳೂರು, ಜೂ.16-ರಾಜ್ಯಸರ್ಕಾರಿ ನೌಕರರಿಗೆ ಶೇ.1.75ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನುಮೋದನೆ ನೀಡಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಧನ್ಯವಾದ ಸಲ್ಲಿಸಿದೆ. ಕಳೆದ ಜ.1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಎಚ್.ಕೆ.ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಬೆಲೆ ಸೂಚ್ಯಂಕವನ್ನು ಆಧರಿಸಿ ತನ್ನ ನೌಕರರಿಗೆ ಕಳೆದ ಜ.1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಮಂಜೂರು ಮಾಡಿದೆ. ಅದೇ ಮಾದರಿ ರಾಜ್ಯಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಮಂಜೂರು ಮಾಡುವಂತೆ ಸಂಘವು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin