ಕೆಪಿಸಿಸಿ ಜವಾಬ್ದಾರಿ ಬೇಡವೆಂದು ವೇಣುಗೋಪಾಲ್ ಅವರಿಗೆ ತಿಳಿಸಿದ್ದೇನೆ : ಸತೀಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

Satish-Jarakihole

ಬೆಂಗಳೂರು, ಜೂ.16-ಕೆಪಿಸಿಸಿ ಜವಾಬ್ದಾರಿ ಬೇಡವೆಂದು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ತಿಳಿಸಿರುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.  ಜೆಪಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಬೇಡವೆಂದು ಸ್ಪಷ್ಟಪಡಿಸಿದ್ದೇನೆ ಎಂದರು.

ಈಗಾಗಲೇ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.   ಬೆಳಗಾವಿ ಜಿಲ್ಲೆಗೆ 2ನೇ ಹಂತದಲ್ಲಿ ಸಚಿವ ಸ್ಥಾನಕ್ಕೆ ಅವಕಾಶವಿಲ್ಲ. ಈಗ ಸಂಪುಟ ಸೇರ್ಪಡೆ ಪ್ರಯತ್ನ ಮಾಡುತ್ತಿಲ್ಲ. ಆದರೆ ನಮ್ಮ ಪರವಾಗಿರುವ ಶಾಸಕರ ಹಿತರಕ್ಷಣೆಗಾಗಿ ಹೋರಾಟ ಮುಂದುವರೆಯಲಿದೆ.  ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರ ವಿಚಾರದಲ್ಲಿ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಲು ವರಿಷ್ಠರು ಮುಂದಾಗಬೇಕು ಎಂದರು.

ಬೆಳಗಾವಿ ನಗರಾಭಿವೃದ್ಧಿಗೆ ಅನುದಾನ ನೀಡುವ ವಿಚಾರಕ್ಕೆ ಸಂಬಂ„ಸಿದಂತೆ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ಜಾರಕಿಹೊಳಿ ತಿಳಿಸಿದರು.

Facebook Comments

Sri Raghav

Admin