“ಸತ್ಯನಾರಾಯಣರಿಗೆ ಸಚಿವ ಸ್ಥಾನ ನೀಡದಿದ್ದರೆ ಕುಂಚಿಟಿಗರು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ”

ಈ ಸುದ್ದಿಯನ್ನು ಶೇರ್ ಮಾಡಿ

Satyanarayana--01

ತುಮಕೂರು, ಜೂ.16- ಶಿರಾ ಶಾಸಕ ಸತ್ಯನಾರಾಯಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕುಂಚಿಟಿಗರ ಸಮುದಾಯವು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಒಕ್ಕಲಿಗ ಕುಂಚಿಟಿಗ ಸಮುದಾಯದ ಮುಖಂಡರಾದ ದೇವರಾಜ್, ಹಾಗೂ ತಿಮ್ಮಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಯ ಕೊನೆಯ ದಿನಗಳವರೆಗೂ ಸತ್ಯನಾರಾಯಣ ಅವರ ಹೆಸರು ಚಾಲ್ತಿಯಲ್ಲಿತ್ತು. ಆದರೆ ಅವರ ಹೆಸರನ್ನು ಈಗ ಕೈಬಿಡಲಾಗಿದೆ. ಎರಡು ಬಾರಿ ಸಚಿವರಾಗಿ , ಶಾಸಕರಾಗಿ ಕಳೆದ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾದಿಸಿರುವ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಕೂಡಲೇ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.  ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇಡೀ ಸಮುದಾಯ ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗೋಷ್ಠಿಯಲ್ಲಿ ಮುಖಂಡರಾದ ಸೋಮಶೇಖರ್, ಹರೀಶ್, ವಿರೂಪಾಕ್ಷ, ಕರಿಯಣ್ಣ, ರಾಮಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin