ಶಾಲೆಯಲ್ಲಿ ದಾಖಲಾತಿ ಕಂಡು ದಂಗಾದ ಶಿಕ್ಷಣ ಸಚಿವರು

ಈ ಸುದ್ದಿಯನ್ನು ಶೇರ್ ಮಾಡಿ

Mahesh-Education-Minitry

ಮೈಸೂರು, ಜೂ.18- ನಗರದ ಜೆ.ಎಲ್.ಬಿ.ರಸ್ತೆಯಲ್ಲಿರುವ ಸರ್ಕಾರಿ ಮಹಾರಾಜ ಪ್ರೌಢಶಾಲೆಗೆ ಇಂದು ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ದಾಖಲಾತಿ ಪ್ರಮಾಣ ನೋಡಿ ಒಂದು ಕ್ಷಣ ದಂಗಾದರು. ಮಹಾರಾಜರ ಕಾಲದಿಂದಲೂ ಈ ಶಾಲೆ ನಡೆದುಕೊಂಡು ಬರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಇದೀಗ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗಿರುವುದನ್ನು ಕಂಡು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಶಾಲೆಯಲ್ಲಿ ಕೇವಲ 122 ಮಂದಿ ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದು, ಹನ್ನೊಂದು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿರುವುದನ್ನೂ ಸಹ ಸಚಿವರು ಇದೇ ವೇಳೆ ಗಮನಿಸಿ ದಾಖಲಾತಿ ಕುಸಿತಕ್ಕೆ ಕಾರಣವೇನೆಂದು ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಶಿಕ್ಷಕರು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೌಢಶಾಲೆಗಳು ಆರಂಭವಾಗಿರುವುದರಿಂದ ಈ ಶಾಲೆಗೆ ವಿದ್ಯಾರ್ಥಿಗಳು ದಾಖಲಾಗಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿ ಈ ಶಾಲೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು. ಈ ಶಾಲೆಗೆ ಬೇಕಾದಂತಹ ಅಗತ್ಯ ಮೂಲಭೂತ ಸೌಲಭ್ಯಗಳ ನೆರವು ನೀಡುವುದಾಗಿ ಸಚಿವರು ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಚಿವರು ಕೆಲ ಕಾಲ ಮಾತುಕತೆ ನಡೆಸಿದರು.

Facebook Comments

Sri Raghav

Admin