ಇಂದು ಬಿನ್ನಿಪೇಟೆ ವಾರ್ಡ್ ಉಪಚುನಾವಣೆ, ಮತದಾನ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

Voting--011
ಬೆಂಗಳೂರು, ಜೂ.18- ಬಿಬಿಎಂಪಿ ಸದಸ್ಯೆ ಮಹದೇವಮ್ಮ ನಾಗರಾಜ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಬಿನ್ನಿಪೇಟೆ ವಾರ್ಡ್‍ಗೆ ಇಂದು ಮರು ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಶಾಂತಿಯುತ ಮತದಾನಕ್ಕಾಗಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಪ್ರಮುಖ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಬಿನ್ನಿಪೇಟೆ ವಾರ್ಡ್‍ನಲ್ಲಿ ಜೆಡಿಎಸ್‍ನಿಂದ ಮಹದೇವಮ್ಮ ನಾಗರಾಜ್ ಅವರ ಪುತ್ರಿ ಐಶ್ವರ್ಯ, ಕಾಂಗ್ರೆಸ್‍ನಿಂದ ವಿದ್ಯಾ ಹಾಗೂ ಬಿಜೆಪಿಯಿಂದ ಚಾಮುಂಡೇಶ್ವರಿ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಸದಸ್ಯೆ ಆಗಿದ್ದ ಮಹದೇವಮ್ಮ ನಿಧನದ ನಂತರ ಪುತ್ರಿ ಐಶ್ವರ್ಯ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಿ ಬಿಬಿಎಂಪಿ ಮಾಜಿ ಸದಸ್ಯೆ ವಿದ್ಯಾ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಮುಖಂಡರ ಈ ಧೋರಣೆಯಿಂದ ಬೇಸತ್ತ ಮಹದೇವಮ್ಮ ಅವರ ಪತಿ ನಾಗರಾಜ್ ಅವರು ಜೆಡಿಎಸ್ ಸೇರ್ಪಡೆಗೊಂಡು ಆ ಪಕ್ಷದಿಂದಲೇ ತಮ್ಮ ಪುತ್ರಿಯನ್ನು ಅಖಾಡಕ್ಕೆ ಇಳಿಸಿದ್ದಾರೆ. ಮೈತ್ರಿ ಪಕ್ಷಗಳ ನಡುವಿನ ಈ ತಿಕ್ಕಾಟವನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿ ಬಿನ್ನಿಪೇಟೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸಿ ಸ್ಥಳೀಯ ಕಾರ್ಯಕರ್ತೆ ಚಾಮುಂಡೇಶ್ವರಿ ಅವರಿಗೆ ಟಿಕೆಟ್ ನೀಡಿದೆ.

Facebook Comments

Sri Raghav

Admin