ಪ್ರಧಾನಿಯನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Modi-Meet-Kumaraswa

ಬೆಂಗಳೂರು, ಜೂ.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಿನ್ನೆ ನಡೆದ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ಇಂದು ಸಂಜೆ ಪ್ರಧಾನಿ ಅವರನ್ನು ಭೇಟಿಯಾಗಿ ರೈತರ ಸಾಲ ಮನ್ನಾ ಸೇರಿದಂತೆ ರಾಜ್ಯದ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಬೇಕಾಗಿರುವ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಭೇಟಿಗೂ ಮುನ್ನ ಕುಮಾರಸ್ವಾಮಿಯವರು ಕೇಂದ್ರ ಸಾರಿಗೆ ಸಚಿವ ನಿತಿನ್‍ಗಡ್ಕರಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ರಾಷ್ಟ್ರೀಯ ಹೆದ್ದಾರಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಹಾಗೂ ಮಂಜೂರಾತಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಿದ್ದರು.

More Updates Awaiting…

Facebook Comments

Sri Raghav

Admin