ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Puttaswamy--01
ಬೆಂಗಳೂರು, ಜೂ.18- ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮೂರು ಪುಟಗಳ ಸುದೀರ್ಘ ಪತ್ರ ಬರೆದಿ ರುವ ಅವರು, ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಮರು ಆಯ್ಕೆ ಬಯಸಿದ್ದ ಪುಟ್ಟಸ್ವಾಮಿ ಅವರಿಗೆ ಪಕ್ಷ ಟಿಕೆಟ್ ನೀಡಲಿಲ್ಲ.

ಇದರಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಸಾಕಷ್ಟು ಜವಾಬ್ದಾರಿಯುತ ಕೆಲಸಗಳನ್ನು ನಿಭಾಯಿಸಿ ದ್ದೇನೆ. ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲೂ ಪಕ್ಷದ ಕೆಲಸಗಳನ್ನು ನಿಷ್ಠೆಯಿಂದ ಮಾಡಿದ್ದೇನೆ. ಪರಿಷತ್‍ನಲ್ಲೂ ನನ್ನ ಪಕ್ಷವನ್ನು ಸಮರ್ಥಿಸಿಕೊಂಡು ಕಾಂಗ್ರೆಸ್‍ನ ವೈಫಲ್ಯಗಳನ್ನು ಎತ್ತಿ ತೋರಿಸಿದ್ದೇನೆ. ಆದರೂ ಪಕ್ಷ ನನ್ನನ್ನು ಯಾವ ಕಾರಣಕ್ಕೆ ಮರು ಆಯ್ಕೆ ಬಯಸಲಿಲ್ಲ ಎಂಬ ಬಗ್ಗೆ ಬೇಸರವಾಗಿದೆ. ಹಾಗಾಗಿ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪರಿಷತ್‍ನ ವಿರೋಧ ಪಕ್ಷದ ಸ್ಥಾನ ನೀಡುವುದಾಗಿ ಬಿಎಸ್‍ವೈ ಹೇಳಿದ್ದರು. ಆದರೆ, ನನಗೆ ಪರಿಷತ್‍ಗೆ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲ. ಯಾವುದೇ ಕಾರಣ ನೀಡದೆ ನನ್ನನ್ನು ಕಡೆಗಣಿಸಲಾಗಿದೆ ಎಂದು ಅಲವತ್ತುಕೊಂಡಿದ್ದಾರೆ. ಪಕ್ಷದ ಬಗ್ಗೆ ನಾನು ನಿರ್ವಹಿಸಿದ ಕೆಲಸಗಳಿಗೆ ಮಾನ್ಯತೆ ನೀಡದಿರುವುದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಆದ್ದರಿಂದ ಈ ಎಲ್ಲ ವಿಷಯಗಳಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

Facebook Comments

Sri Raghav

Admin