ಪ್ರಮಾಣ ವಚನ ಸ್ವೀಕರಿಸಿದ ಶಾಸಕಿ ಸೌಮ್ಯಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Soumya-Reddy--01
ಬೆಂಗಳೂರು, ಜೂ.18: ಜಯನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಸೌಮ್ಯಾರೆಡ್ಡಿ ಇಂದು (ಸೋಮವಾರ) ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ತಮ್ಮ ಕಚೇರಿಯಲ್ಲಿ ನೂತನ ಶಾಸಕಿಗೆ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸೌಮ್ಯಾರೆಡ್ಡಿ ಅವರ ತಾಯಿ ಚಾಮುಂಡೇಶ್ವರಿ ಹಾಗೂ ಸಹೋದರ ಉಪಸ್ಥಿತರಿದ್ದರು. ಆದರೆ, ಅವರ ತಂದೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ನೂತನ ಶಾಸಕರಿಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಮೂರು ದಿನ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ತಿಳಿಸಿದರು.

ಶಾಸಕರ ಭವನ ದುರ್ಬಳಕೆಗೆ ಸ್ಪೀಕರ್ ಬ್ರೇಕ್ : 
ಶಾಸಕರ ಭವನ ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಮುಂದಾಗಿರುವ ವಿಧಾನಸಭಾ ಅಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಈ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್ ‘ ಶಾಸಕರ ಭವನದ ಭೇಟಿಯ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನಿಗದಿ ಮಾಡಲಾಗಿದೆ, ಈ ಸಮಯದ ನಂತರ ಶಾಸಕರ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಇನ್ನ್ಯಾರಿಗೂ ಶಾಸಕರ ಭವನದಲ್ಲಿ ಪ್ರವೇಶವಿಲ್ಲ ಎಂದು ಹೇಳಿದ್ದಾರೆ.  ಶಾಸಕರಲ್ಲದವರ ಕಾರುಗಳನ್ನು ನಿಲುಗಡೆ ಮಾಡುವಂತಿಲ್ಲ. ಈ ಕ್ಷಣದಿಂದಲೇ ನಿಯಮಾವಳಿ ಜಾರಿಗೊಳಿಸಲಾಗುತ್ತದೆ ಎಂದು ರಮೇಶ್‌ಕುಮಾರ್ ಹೇಳಿದರು.   ಶಾಸಕರ ಭವನ ದುರ್ಬಳಕೆಯಾಗುತ್ತಿರುವುದರ ಬಗ್ಗೆ ದೂರು ಬಂದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Facebook Comments

Sri Raghav

Admin