ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಟ 481 ಗಳಿಸಿ ವಿಶ್ವದಾಖಲೆ ಬರೆದ ಇಂಗ್ಲೆಂಡ್

ಈ ಸುದ್ದಿಯನ್ನು ಶೇರ್ ಮಾಡಿ

Cricket--01

ನಾಟಿಂಗ್‌ಹ್ಯಾಮ್, ಜೂ.19: ಆಸ್ಟ್ರೇಲಿಯ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೂತನ ವಿಶ್ವ ದಾಖಲೆ ನಿರ್ಮಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 481 ರನ್ ಬಾರಿಸಿದ್ದು ಇದು ತಂಡವೊಂದು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ದಾಖಲಿಸಿದ ಅತ್ಯಧಿಕ ಮೊತ್ತವಾಗಿದೆ.  ಎರಡು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ನಾಟಿಂಗ್‌ಹ್ಯಾಮ್ ಮೈದಾನದಲ್ಲೇ 3 ವಿಕೆಟ್ ನಷ್ಟಕ್ಕೆ 444 ರನ್ ಗಳಿಸಿದ್ದ ಇಂಗ್ಲೆಂಡ್ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಮೊತ್ತ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿತ್ತು. ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದೆ.

ಅಗ್ರ ಸರದಿ ದಾಂಡಿಗರಾದ ಜಾನಿ ಬೈರ್‌ಸ್ಟೋವ್ 139 , ಅಲೆಕ್ಸ್ ಹೇಲ್ಸ್ 147 ರನ್ ಗಳಿಸಿದರೆ, ಆರಂಭಿಕ ಆಟಗಾರ ಜೇಸನ್ ರಾಯ್(82) ಹಾಗೂ ನಾಯಕ ಇಯಾನ್ ಮೊರ್ಗನ್(67) ರನ್ ಗಳಿಸಿ ಗರಿಷ್ಟ ದಾಖಲೆ ಮೊತ್ತವನ್ನು ಪೇರಿಸಲು ನೆರವಾದರು . ಇನ್ನು 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

Facebook Comments

Sri Raghav

Admin