ಕೊಳೆತ ಸ್ಥಿತಿಯಲ್ಲಿ ನಗರಸಭೆ ನೌಕರನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Dead-Body-Women
ಚನ್ನಪಟ್ಟಣ, ಜೂ.19- ಅವಿವಾಹಿತ ನಗರಸಭೆ ನೌಕರನೊಬ್ಬ ನೇಣು ಬಿಗಿದುಕೊಂಡ ರೀತಿಯಲ್ಲಿ ಕೊಳೆತ ಶವ ಪತ್ತೆಯಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೆಯ ವರದರಾಜಸ್ವಾಮಿಯ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಪತ್ತೆಯಾಗಿರುವ ಮೃತದೇಹ ನರಸಿಂಹಮೂರ್ತಿ (25) ಎಂದು ತಿಳಿದು ಬಂದಿದ್ದು, ಮಾಗಡಿ ತಾಲ್ಲೂಕಿನ ಬೈಚಾಪುರ ಗ್ರಾಮದ ಲೇಟ್ ಚಿಕ್ಕವೀರಯ್ಯ ಎಂಬುವರ ಮಗನಾದ ಈತ ವರದರಾಜಸ್ವಾಮಿ ಬಡಾವಣೆಯ ತನ್ನ ಬಾಡಿಗೆ ಕೊಠಡಿಯಲ್ಲಿ ಕೊಳೆತ ಶವವಾಗಿ ಪತ್ತೆಯಾಗಿದ್ದಾನೆ. ಕೆಲ ವರ್ಷಗಳಿಂದಲೂ ರಾಮನಗರದ ನಗರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರಸಿಂಹಮೂರ್ತಿಗೆ ತಂದೆ-ತಾಯಿ ಯಾರೂ ಇರಲಿಲ್ಲ ಎನ್ನಲಾಗಿದ್ದು, ಸದಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದನೆನ್ನಲಾಗಿದೆ.

ರಾಮನಗರದ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡು ಕೋಟೆಯ ವರದರಾಜಸ್ವಾಮಿ ಬಡಾವಣೆಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಈತ ಮೂರು ದಿನಗಳ ಹಿಂದೆಯೇ ಸಾವನ್ನಪ್ಪಿದ್ದು, ಯಾರೂ ಗಮನಿಸದೆ ಮೃತದೇಹ ಕೊಳೆತು ದುರ್ವಾಸನೆ ಬೀರಿದೆ.  ಮನೆಯ ಮಾಲೀಕ, ಸ್ಥಳೀಯರು ಕೊಠಡಿಯಿಂದ ಬರುತ್ತಿದ್ದ ಕೆಟ್ಟವಾಸನೆ ಗಮನಿಸಿದಾಗ ತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಈ ವ್ಯಕ್ತಿಯ ಶವ ಪತ್ತೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋದ ನಗರ ಪೊಲೀಸರು ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಖಿನ್ನತೆಯಿಂದ ಮನನೊಂದಿದ್ದ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಸಂಬಂಧಿಕರು ಅನುಮಾನಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin