ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Police-constable

ಪೊಲೀಸ್ ಇಲಾಖೆಯು (ಸಶಸ್ತ್ರ) ಕಾನ್ಸ್’ಟೇಬಲ್ (ಸಿಎಆರ್ / ಡಿಎಆರ್) ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ಸಂಖ್ಯೆ : 688
ಹುದ್ದೆಗಳ ವಿವರ
1. ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ (ಪುರುಷ) – 688
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ / 10ನೇ ತರಗತಿ ಉತ್ತೀರ್ಣರಾಗಿರಬೇಕು. ಇಲ್ಲದಿದ್ದಲ್ಲಿ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 25 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 27 ವರ್ಷ, ಬುಡಕಟ್ಟು ಪ್ರದೇಶದವರಿಗೆ 30 ವóರ್ಷದವರೆಗೆ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-07-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.ksp.gov.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments