ಚರಂಡಿಯಲ್ಲಿ ಕಾಂಡೋಮ್‍ಗಳು ಪತ್ತೆ, ಸ್ಪಾ ಮೇಲೆ ಪೊಲೀಸರ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Spa--01

ಮೈಸೂರು, ಜೂ.20-ಚರಂಡಿ ಸ್ವಚ್ಛತೆ ವೇಳೆ ಭಾರೀ ಪ್ರಮಾಣದಲ್ಲಿ ಕಾಂಡೋಮ್‍ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಪಾವೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಚರಂಡಿಯನ್ನು ಕಾರ್ಮಿಕರು ಸ್ವಚ್ಛಗೊಳಿಸುವ ವೇಳೆ ಭಾರೀ ಪ್ರಮಾಣದಲ್ಲಿ ಕಾಂಡೋಮ್‍ಗಳು ಪತ್ತೆಯಾಗಿವೆ. ಈ ಸಂಬಂಧ ಕಾರ್ಮಿಕರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಸಮೀಪದ ಸ್ಪಾವೊಂದರ ಮೇಲೆ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಮಹಿಳೆಯರು ಪರಾರಿಯಾಗಿದ್ದು, ಮತ್ತಿಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ. ನಾವು ಇಲ್ಲಿ ಕೆಲಸ ಮಾಡುತ್ತಿದ್ದೇವೆ. ಮಹಿಳೆಯರು ನಮಗೂ ಇದಕ್ಕೂ ಯಾವುದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಇದೇ ವೇಳೆ ಪಾರ್ಲರ್‍ನಲ್ಲಿ ಕಾಂಡೋಮ್‍ಗಳು ಪತ್ತೆಯಾಗಿವೆಯಲ್ಲ ಇದಕ್ಕೆ ಏನು ಹೇಳುತ್ತೀರಿ ಎಂದು ಪೊಲೀಸರು ಪ್ರಶ್ನಿಸಿದಾಗ ಮಹಿಳೆಯರು ತಡಬಡಾಯಿಸಿದ್ದಾರೆ ಎನ್ನಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೂ ಈ ಪಾರ್ಲರ್‍ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಕೇರಳ ಮೂಲದ ಮಹಿಳೆಯರು ಇಲ್ಲಿಗೆ ಬಂದು ಹೋಗುತ್ತಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

Facebook Comments

Sri Raghav

Admin