ಸಮ್ಮಿಶ್ರ ಸರ್ಕಾರದ ಬಜೆಟ್ ಪೂರ್ವಭಾವಿ ಸಭೆ ಪ್ರಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-Parameshwar
ಬೆಂಗಳೂರು, ಜೂ.21- ಸಮ್ಮಿಶ್ರ ಸರ್ಕಾರದ ಆಯವ್ಯಯದ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಾರಂಭಿಸಿದ್ದಾರೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳು ಇಂದು ಶಕ್ತಿ ಭವನದಲ್ಲಿ ಸಭೆಯನ್ನು ಆರಂಭಿಸಿದ್ದು, ಇಂದಿನಿಂದ ಜೂ.30ರವರೆಗೂ ಬಜೆಟ್ ಪೂರ್ವ ಸಭೆಗಳನ್ನು ನಿರಂತರವಾಗಿ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಕಾರ್ಮಿಕ ಇಲಾಖೆ, ವೈದ್ಯಕೀಯ ಶಿಕ್ಷಣ, ಸಂಪನ್ಮೂಲ, ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಾನೂನು ಇಲಾಖೆಗಳ ಪೂರ್ವ ಸಿದ್ದತಾ ಸಭೆಯನ್ನು ಸಂಜೆ ವರೆಗೂ ಹಮ್ಮಿಕೊಳ್ಳಲಾಗಿತ್ತು. ಮುಖ್ಯಕಾರ್ಯದರ್ಶಿ ರತ್ನಪ್ರಭಾ, ಇಲಾಖೆಯ ಅಧಿಕಾರಿಗಳು, ಆಯಾ ಇಲಾಖೆಗಳ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin