ಬೆಂಗಳೂರಿನ ಸಮಸ್ಯೆಗಳ ನಿವಾರಣೆಗೆ ಕೈಗಾರಿಕೆಗಳು ಸಲಹೆ ನೀಡಲಿ : ಡಿಸಿಎಂ ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwar--01
ಬೆಂಗಳೂರು. ಜೂ.21 : ಕಸ, ಟ್ರಾಫಿಕ್, ಕೆರೆ ಹಾಗೂ ರಸ್ತೆ ಗುಂಡಿಗಳ ಸಮಸ್ಯೆಗಳನ್ನು ನಿವಾರಿಸಲು ಕೈಗಾರಿಕೆಗಳು ಸಲಹೆ ನೀಡುವ ಮೂಲಕ ತಮ್ಮ ಕೊಡುಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕರೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಗುರುವಾರ ಎಫ್‌ಕೆಸಿಸಿಐ ಎಂ.ವಿ. ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎಸ್‌ಆರ್ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ನ್ಯೂಯಾರ್ಕ್, ಯುಎಸ್‌ಗಳಲ್ಲಿಯೂ ಟ್ರಾಫಿಕ್ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರು ಟ್ರಾಫಿಕ್ ಬಗ್ಗೆ ಮಾತನಾಡುತ್ತಾರೆ. ನಗರದ ಟ್ರಾಫಿಕ್ ಸಮಸ್ಯೆ ಜೊತೆಗೆ ಕಸ, ರಸ್ತೆ ಗುಂಡಿಯೂ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಕೈಗಾರಿಕೆಗಳ ಸಲಹೆ, ಸೂಚನೆ ಅಗತ್ಯವಿದೆ. ಹೀಗಾಗಿ ಎಲ್ಲ ಕೈಗಾರಿಕೆಗಳು ತಮ್ಮ ಸಲಹೆ ನೀಡುವಂತೆ ಹೇಳಿದರು. ನಗರದ ಈ ಮೂಲ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ‌ ದಿನಗಳಲ್ಲಿ ಇನ್ನಷ್ಟು ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 71 ವರ್ಷಗಳು ಸಂದಿದ್ದು, ಕಡಿಮೆ ಅವಧಿಯಲ್ಲೇ ನಮ್ಮ ದೇಶ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ.

ಆದರೂ ಶೇ. 38 ರಷ್ಟು ಬಡತನ ಈಗಲೂ ಇದೆ. ನಿರುದ್ಯೋಗ ಸಮಸ್ಯೆಯೂ ಹೆಚ್ಚುತ್ತಿದ್ದು,. ಇದಕ್ಕೆ ಕಾರಣ ಶಿಕ್ಷಣ ವ್ಯವಸ್ಥೆ. ಅಕಾಡೆಮಿ ಹಾಗೂ ಕೈಗಾರಿಕೆ ನಡುವೆ ಉತ್ತಮ ಹೊಂದಾಣಿಕೆ ಇಲ್ಲದ ಕಾರಣ ಶಿಕ್ಷಣ ಪಡೆದ ಎಷ್ಟೋ ಯುವಕರು ನಿರುದ್ಯೋಗಿಗಳಾಗಿದ್ದಾರೆ‌. ಹೀಗಾಗಿ, ಅಕಾಡೆಮಿ ಹಾಗೂ ಕೈಗಾರಿಕೆ ನಡುವೆ ಸೇತುವೆ ನಿರ್ಮಿಸಿ, ಯಾವ ರೀತಿಯ ಶಿಕ್ಷಣ ಬೇಕಿದೆ ಎಂಬುದನ್ನು ಕೈಗಾರಿಕೆಗಳು ಸಲಹೆ ನೀಡಿದರೆ ನಿರುದ್ಯೋಗ ಸಮಸ್ಯೆ ಕೂಡ ನಿವಾರಣೆಯಾಗಲಿದೆ. ಅಲ್ಲದೆ, ಶಿಕ್ಷಣ ವ್ಯವಸ್ಥೆಯ ಪಾಲಿಸಿ ಬದಲಾವಣೆ ಮಾಡಬೇಕಿದೆ ಎಂದು ಹೇಳಿದರು.

Facebook Comments

Sri Raghav

Admin