4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಹಾಲಿ-ಮಾಜಿ ಪ್ರಧಾನಿಗಳಿಂದ ಯೋಗಾಭ್ಯಾಸ

ಈ ಸುದ್ದಿಯನ್ನು ಶೇರ್ ಮಾಡಿ

Modi-Yoga

ನವದೆಹಲಿ. ಜೂ.21 : ದೇಶಾದ್ಯಂತ ಇಂದು 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ಅರಣ್ಯ ಸಂಶೋಧನೆ ಸಂಸ್ಥೆಯಲ್ಲಿ ಸುಮಾರು 50,000 ಕಾರ್ಯಕರ್ತರೊಂದಿಗೆ ಯೋಗ ಮಾಡಿದರೆ, ಇತ್ತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆಯಿಂದಲೇ ವಿವಿಧ ಆಸನಗಳನ್ನು ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

WhatsApp Image 2018-06-21 at 8.09.12 AM

ಹೈಲೈಟ್ಸ್ :
# 2015 ಜೂನ್ 21 ರಿಂದ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಗುರುತಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಮಾಡಿದ್ದ ಮನವಿಯನ್ನು ವಿಶ್ವಸಂಸ್ಥೆ ಒಪ್ಪಿಕೊಂಡಿತ್ತು. ಈ ಕಾರಣ ಜೂನ್ 21 ರಂದು ವಿಶ್ವದಾದ್ಯಂತ ಯೋಗದಿನ ಆಚರಿಸಲಾಗುತ್ತಿದೆ.

# ದೇಶದಾದ್ಯತಾ ಲಕ್ಷಾಯಾಂತರ ಜನ್ಯ ಯೋಗಾಭ್ಯಾಸ ಮಾಡುವ ಮೂಲಕ ವಿಶ್ವ ಯೋಗದಿಂದ ಆಚರಿಸುತ್ತಿದ್ದಾರೆ.

# ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಗ ದಿನ ಕಾರ್ಯಕ್ರಮ ನಡೆಸುತ್ತಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದಾರೆ. ವಿವಿಧ ಯೋಗ ಗುರುಗಳು, ಸರ್ಕಾರದ ಸಚಿವರು ಕೂಡ ಯೋಗ ದಿನ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.
# ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಯೋಗಾಭ್ಯಾಸದಲ್ಲಿ ನಿರತರಾಗಿದ್ದಾರೆ.

# ರಾಷ್ಟ್ರಪತಿ, ಉಪ ರಾಷ್ಟ್ರಪತಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಸೇನಾ ಯೋಧರು ದೇಶದ ಮೂಲೆ ಮೂಲೆಗಳಲ್ಲಿ ವಿವಿಧ ಯೋಗಾಭ್ಯಾಸಗಳಲ್ಲಿ ಇಂದು ಬೆಳಗ್ಗೆಯಿಂದಲೇ ನಿರತರಾಗಿದ್ದಾರೆ.

WhatsApp Image 2018-06-21 at 8.09.25 AM WhatsApp Image 2018-06-21 at 8.09.12 AM WhatsApp Image 2018-06-21 at 8.09.08 AM

Facebook Comments

Sri Raghav

Admin