ಗೌರಿ ಹತ್ಯೆ ಪ್ರಕಾರದಲ್ಲಿ ಪೊಲೀಸರ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಈ ಸುದ್ದಿಯನ್ನು ಶೇರ್ ಮಾಡಿ

Police-CM--04
ಬೆಂಗಳೂರು, ಜೂ.22- ಕೋಮು ವಿಷಯದಲ್ಲಿ ಶಾಂತಿ ಕದಡುವವರ ಮೇಲೆ ಹಾಗೂ ಅಂತಹ ಸಂಸ್ಥೆಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪೊಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳು ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಇದಕ್ಕಾಗಿ ಎಸ್‍ಐಟಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್‍ಪಿ, ಡಿಸಿಪಿ ಮತ್ತು ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡುವುದಾಗಿ ಅವರು ಹೇಳಿದರು.

Facebook Comments

Sri Raghav

Admin