ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ, ಶಾಂತಿ-ಸೌಹಾರ್ದತೆ ಕಾಪಾಡುವಂತೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Police-CM--02

ಬೆಂಗಳೂರು, ಜೂ.22- ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೆ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸಮಾಜದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು.
ಪೊಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಪೊಲೀಸ್ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ತಮ್ಮ ಮೇಲೆ ಒತ್ತಡಗಳು ಬರಬಹುದು. ಜಾಗೃತರಾಗಿರಬೇಕು. ಯಾವುದೇ ಒತ್ತಡಗಳಿಗೆ ಮಣಿಯದಂತೆ ತಮ್ಮ ಪಾಲಿನ ಕರ್ತವ್ಯವನ್ನು ದಕ್ಷತೆಯಿಂದ ನಿರ್ವಹಿಸಿ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕು. ಜನಸ್ನೇಹಿಯಾಗಿರಬೇಕು ಎಂದು ಸಲಹೆ ನೀಡಿದರು.

Police-CM--01

ರೌಡಿ ಚಟುವಟಿಕೆಗಳನ್ನು ನಿರ್ದಾಕ್ಷಿಣ್ಯವಾಗಿ ನಿಯಂತ್ರಿಸಿ, ಅಪರಾಧಿಗಳನ್ನು ಎಡೆಮುರಿಕಟ್ಟಿ ,ಭೂಗತ ಚಟುವಟಿಕೆಗಳನ್ನು ಮಟ್ಟ ಹಾಕಿ, ನಕ್ಸಲ್ ಚಟುವಟಿಕೆಗಳನ್ನು ತಲೆ ಎತ್ತದಂತೆ ಮಾಡಿ, ಕೋಮು ಸಂಘರ್ಷ ನಡೆಯದಂತೆ ನೋಡಿಕೊಂಡು ಸಮಾಜ ಶಾಂತಿಯುತವಾಗಿ ಇರುವಂತೆ ಮಾಡಬೇಕಾದ ಜವಾಬ್ದಾರಿ ತಮ್ಮ ಮೇಲಿದೆ. ತಾವು ಅಹರ್ನಿಶಿಯಾಗಿ ಕೆಲಸ ಮಾಡಬೇಕು. ಈ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತರಬೇಕು ಎಂದು ಹೇಳಿದರು.

Police-CM--03

ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಮಾತನಾಡಿ, ಕೋಮು ಸೌಹಾರ್ದ ಕದಡುವಂತಹ ಶಕ್ತಿಗಳು ಸಮಾಜದಲ್ಲಿ ತಲೆ ಎತ್ತಲು ಮುಂದಾಗುತ್ತಿವೆ. ಇವುಗಳನ್ನು ನಿಯಂತ್ರಿಸಬೇಕಾದ ಅಗತ್ಯವಿದೆ. ಪೊಲೀಸರು ಸದಾ ಎಚ್ಚರದಲ್ಲಿರಬೇಕು. ತಾವು ಎಚ್ಚರ ತಪ್ಪಿದರೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕೆಂದು ಪರಮೇಶ್ವರ್ ಹೇಳಿದರು.

Police-CM--07

ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Police-CM--06

Police-CM--05

Facebook Comments

Sri Raghav

Admin