ಶೀಘ್ರದಲ್ಲೇ ಪೊಲೀಸ್ ಇಲಾಖೆಯ 14,000 ಹುದ್ದೆಗಳು ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Police--01
ಬೆಂಗಳೂರು, ಜೂ.22 – ಇಲಾಖೆಯಲ್ಲಿ ಖಾಲಿ ಇರುವ 14 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಪೊಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತರ ಸಂಖ್ಯೆಗೆ ಅನುಗುಣವಾಗಿ ನೇಮಕಾತಿ ನಡೆಯಬೇಕು.

14 ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಅಪರಾಧಗಳ ಸಂಖ್ಯೆಯಲ್ಲಿ ನಾವು 10ನೆ ಸ್ಥಾನದಲ್ಲಿದ್ದೇವೆ. ಠಾಣೆಗೆ ಬರುವ ಜನಸಾಮಾನ್ಯರನ್ನು ಪೊಲೀಸರು ಸ್ನೇಹಿತರಂತೆ ಕಾಣಬೇಕು. ರಾಜ್ಯದಲ್ಲಿ ಕೋಮುಗಲಭೆ ಆಗಬಾರದು. ಪ್ರಚೋದನೆ ಮಾಡುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಜಾತಿ, ಧರ್ಮ, ಭೇದ, ಭಾವ ಮಾಡಬಾರದು ಎಂದು ಹೇಳಿದರು.

Facebook Comments

Sri Raghav

Admin