ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ವರದಿ ಶೀಘ್ರವೇ ಸರ್ಕಾರಕ್ಕೆ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Puttaragashetty--01
ಬೆಂಗಳೂರು, ಜೂ.22- ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು. ವಿಧಾನಸೌಧದಲ್ಲಿ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಮಂಡಿಸಲು ಆಯೋಗದ ಅಧ್ಯಕ್ಷರು ಒಪ್ಪಿದ್ದಾರೆ ಎಂದರು.

ಕಳೆದ ಸರ್ಕಾರ ಆರ್ಥಿಕ ಮತ್ತು ಸಾಮಾಜಿಕ ಗಣತಿಗಾಗಿ 150ಕೋಟಿ ವೆಚ್ಚ ಮಾಡಿದ್ದು, ಇನ್ನೂ ಹೆಚ್ಚು ಹಣ ಬೇಕೆಂಬ ಪ್ರಸ್ತಾವನೆ ಇದೆ ಎಂದು ಹೇಳಿದರು. ರಾಜ್ಯದ ಕೆಲವೊಂದು ಹಿಂದುಳಿದ ಜಾತಿಗಳಲ್ಲಿರುವ ಮೌಢ್ಯಾಚರಣೆ ತೊಡೆದು ಹಾಕಲು ಆದ್ಯತೆ ನೀಡುವುದಾಗಿ ಸಚಿವರು ತಿಳಿಸಿದರು.

Facebook Comments

Sri Raghav

Admin