ಬೈಕ್–ಕಾರಿನ ನಡುವೆ ಡಿಕ್ಕಿಯಾಗಿ ಸವಾರ ಸಾವು, ಕಾರಿನಲ್ಲಿದ್ದವರ ಪವಾಡ ರೀತಿಯಲ್ಲಿ ಪಾರು

ಈ ಸುದ್ದಿಯನ್ನು ಶೇರ್ ಮಾಡಿ

Car-Accident-------0--1

ಅರಸೀಕೆರೆ, ಜೂ.23- ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೇ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿ ಕಂಬವೇ ಮುರಿದು ಕಾರಿನ ಮೇಲೆ ಬಿದ್ದರೂ ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ.

ಬೈಕ್ ಸವಾರ ಸಂಕೊಡನಹಗಳ್ಳಿಯ ಮಲ್ಲಿಕಾರ್ಜುನ(32) ಮೃತ ದುರ್ದೈವಿ. ಶಿವಮೊಗ್ಗದಿಂದ ಬೆಂಗಳೂರು ಕಡೆ ಸಾಗುತ್ತಿದ್ದ ಕಾರು ಹಾಗೂ ಬೈಕ್ ನಡುವೆ ರಾಷ್ಟ್ರೀಯ ಹೆದ್ದಾರಿ 206 ಟಿ ಹೆಚ್ ರಸ್ತೆ ಜಾಜೂರು ಸಮೀಪ ನಿನ್ನೆ ಸಂಜೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದರು ಕಾರಿನಲ್ಲಿ ಏರ್‍ಬ್ಯಾಗ್ ತೆರೆದುಕೊಂಡ ಕಾರಣ ಕಾರಿನಲ್ಲಿದ್ದವರು ಸಾವು ನೋವು ಇಲ್ಲದೇ ಪಾರಾದರೇ ಕಾರು ಮಾತ್ರ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್‍ಪಿ ಸದಾನಂದ ತಿಪ್ಪಣ್ಣನವರು ವೃತ್ತ ನಿರೀಕ್ಷಕ ಸಿದ್ದರಾಮೇಶ್ ಹಾಗೂ ಸಬ್‍ಇನ್ಸ್‍ಪೆಕ್ಟರ್ ಪುರುಷೋತ್ತಮ್ ಭೈೀಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಭಂದ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin