ಧರ್ಮಸ್ಥಳದಿಂದ ಕುಕ್ಕೆಗೆ ತೆರಳುತ್ತಿದ್ದ ಭಕ್ತರ ಕಾರಿನ ಮೇಲೆ ಕಾಡಾನೆ ದಾಳಿ, ಐವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Elephant-attack

ಕುಕ್ಕೆಸುಬ್ರಹ್ಮಣ್ಯ,ಜೂ.23-ಧರ್ಮಸ್ಥಳದಿಂದ ಕುಕ್ಕೆ ಸುಬ್ರ್ಹಮಣ್ಯಕ್ಕೆ ತೆರಳುತ್ತಿದ್ದ ಭಕ್ತರ ಕಾರಿನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸೂಳ್ಯದ ಬಿಳಿನೆಲೆಯ ಬಳಿ ನಡೆದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಉಳಿದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರೆಲ್ಲರೂ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರು ಎಂದು ತಿಳಿದುಬಂದಿದ್ದು, ಧರ್ಮಸ್ಥಳಕ್ಕೆ ಬಂದಿದ್ದ ಇವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಿಳಿನೆಲೆ ಮಾರ್ಗದ ಬಳಿ ಕಾಡಾನೆಯೊಂದು ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Facebook Comments

Sri Raghav

Admin