ಹಾವೇರಿಯಲ್ಲಿ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

murder

ಹಾವೇರಿ, ಜೂ.23- ಮನೆಯಲ್ಲಿಯೇ ದಂಪತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರ್ತಾಂಡಪ್ಪ ಅಂಬಿಗೇರ (40), ಪತ್ನಿ ಸುಧಾ ಅಂಬಿಗೇರ (26) ಮೃತ ದುರ್ದೈವಿಗಳು. ದುಷ್ಕರ್ಮಿಗಳು ಈ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದು, ಜೋಡಿ ಕೊಲೆಗೆ ಜಿಲ್ಲೆಯೇ ಬೆಚ್ಚಿಬಿದ್ದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin