ಸೋಮವಾರಪೇಟೆ ಬಳಿ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ನಿಗೂಢ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Kodagu--014

ಮಡಿಕೇರಿ, ಜೂ.24- ಸೋಮವಾರಪೇಟೆಯ ಕೂಡಿಗೆ ಬಳಿ ಇರುವ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾ ಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾದಾಪುರ ಗ್ರಾಮದ ನಿವಾಸಿ ಚಿಂಗಪ್ಪ (14) ಮೃತಪಟ್ಟ ಬಾಲಕ. ಸೈನಿಕ ಶಾಲೆಯಲ್ಲಿ 9ನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ನಿನ್ನೆ ಎಂದಿನಂತೆ ಶಾಲೆಗೆ ತೆರಳಿ ಅಲ್ಲಿ ಅಸ್ವಸ್ಥಗೊಂಡಿದ್ದ ಆತನನ್ನು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು.  ವೈದ್ಯರು ಪರೀಕ್ಷೆ ನಡೆಸಿ ಆತ ಮೃತಪಟ್ಟಿದ್ದಾನೆಂದು ತಿಳಿಸಿದಾಗ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ವಿಷಯ ತಿಳಿದ ಗ್ರಾಮಸ್ಥರು ಹಾಗೂ ಕೆಲ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸೈನಿಕ ಶಾಲೆಯ ಪ್ರಾಂಶುಪಾಲರು ಬರಬೇಕು. ಘಟನೆಗೆ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದರು. ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತನ ತಂದೆ ಪೂವಯ್ಯ ಅವರು ಮಗನನ್ನು ಕೊಲೆ ಮಾಡಲಾಗಿದೆ ಎಂದು ದೂರು ನೀಡಿದ್ದು, ವಿದ್ಯಾರ್ಥಿಗಳು ಸ್ನೇಹಿತನನ್ನು ಕಳೆದುಕೊಂಡು ಕಣ್ಣೀರು ಹಾಕಿ ದುಃಖಿತರಾಗಿದ್ದಾರೆ.

Facebook Comments

Sri Raghav

Admin