ದೋಸ್ತಿ ಸರ್ಕಾರದಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿದ ಸಿದ್ದು ಮಾತು…!

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01
ಬೆಂಗಳೂರು,ಜೂ.25-ರೈತರ ಸಾಲಮನ್ನಾ ಹಾಗೂ ಬಜೆಟ್ ಮಂಡನೆ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಡಿರುವ ಮಾತು ಈಗ ದೋಸ್ತಿ ಸರ್ಕಾರದಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿದೆ. ನಾನು ಬಜೆಟ್ ಮಂಡನೆ ಮಾಡುತ್ತೇನೋ ಇಲ್ಲವೊ ಗೊತ್ತಿಲ್ಲ. ನಾನು ಯಾರ ಹಂಗಿನಲ್ಲಿಯೂ ಇಲ್ಲ. ರೈತರ ಸಾಲ ಮನ್ನಾ ಮಾಡುವುದರಿಂದ ನನಗೆ ಕಮೀಷನ್ ಬರುತ್ತದೆಯೇ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೂ ಸರಿಯಲ್ಲ ಎಂಬುದು ಸಾಬೀತಾಗಿದೆ.
ಈ ನಡುವೆ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸಲು ಮುಂದಾಗಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸರ್ಕಾರದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೂಡ ಯಾವುದೇ ವೈಮನಸ್ಸುಗಳಿದ್ದರೂ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಗಳ ನಡುವೆಯೂ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡುವುದು ಬೇಡ ಎಂದರೆ ನಮಗೂ ಬೇಡ. ಹಣಕಾಸು ಖಾತೆಯನ್ನು ಹೊಂದಿರುವ ಕುಮಾರಸ್ವಾಮಿ ಅವರು ಪೂರಕ ಬಜೆಟ್ ಮಂಡಿಸಲಿ ಎಂದು ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಇನ್ನೊಂದೆಡೆ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದು , ಹೊಸದಾಗಿ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸುವಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.  ಒಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ವೈಮನಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿರೋಧ ಪಕ್ಷಗಳ ಕೈಗೆ ಪ್ರಬಲ ಅಸ್ತ್ರವನ್ನು ನೀಡಿದಂತಾಗಿದೆ. ಸೋಮವಾರ ನಡೆದಿರುವ ಬೆಳವಣಿಗೆಗಳನ್ನು ಅವಲೋಕಿಸಿದರೆ ಹಾಗೂ ಕುಮಾರಸ್ವಾಮಿ ಮಾಡಿರುವ ಮಾತುಗಳನ್ನು ಅವಲೋಕಿಸಿದರೆ ಸಮ್ಮಿಶ್ರ ಸರ್ಕಾರದ ಆಯಸ್ಸು ಎಷ್ಟು ದಿನ ಇರುತ್ತದೆ ಎಂಬ ಪ್ರಶ್ನೆ ಮಾಡಿದರು.

ಜು.5ರಂದು ಬಜೆಟ್ ಮಂಡಿಸಬೇಕೆಂದು ತೀರ್ಮಾನಿಸಿದ್ದೆ. ಆದರೆ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಬಜೆಟ್ ಮಂಡನೆ ಮಾಡುತ್ತೇನೋ ಇಲ್ಲವೋ ಎಂಬ ಗೊಂದಲದ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದಾರೆ.

ಎಲ್ಲವೂ ಬಗೆಯಹರಿಯಲಿದೆ:
ಇನ್ನು ಇಡಗುಂಜಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣಪುಟ್ಟ ಗೊಂದಲಗಳು ಇರುವುದು ಕಂಡುಬಂದರೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳಲಾಗುವುದು.ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಿ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದುಗೆ ವೀರಪ್ಪ ಮೊಯ್ಲಿ ಬೆಂಬಲ:
ಇನ್ನು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಹಾಗೂ ಸಂಸದ ವೀರಪ್ಪ ಮೊಯ್ಲಿ ಸಿದ್ದರಾಮಯ್ಯನವರಿಗೆ ಬೆಂಬಲ ಸೂಚಿಸಿದ್ದಾರೆ.ಅನುಷ್ಠಾನವಾಗಿರುವ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದಿದ್ದಾರೆ.

ಜಾರಕಿ ಹೊಳಿ ಟಾಂಗ್:
ಇನ್ನುಸಿದ್ದರಾಮಯ್ಯನವರ ಆಪ್ತ ಹಾಗೂ ಸಚಿವ ರಮೇಶ್ ಜಾರಕಿ ಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಓರ್ವ ಅನುಭವಿ ರಾಜಕಾರಣಿ. ಅವರಿಗೆ ಏನು ಮಾತನಾಡಬೇಕು,ಏನು ಮಾತನಾಡಬಾರದು ಎಂಬುದು ತಿಳಿದಿದೆ. ಬಜೆಟ್ ಮಂಡಿಸುವುದು ಬೇಡ ಎಂದರೆ ನಮಗೂ ಬೇಡ. ಪೂರಕ ಬಜೆಟ್ ಮಂಡಿಸಿದರೆ ಆಗುವ ನಷ್ಟವಾದರೂ ಏನು ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರನ್ನು ಯಾರೊಬ್ಬರನ್ನು ನಿರ್ಲಕ್ಷ್ಯ ಮಾಡಲು ಸಾದ್ಯವಿಲ್ಲ. ಅವರು ಪ್ರಧಾನಿ ನರೇಂದ್ರ ಮೋದಿಗೆ ಸರಿಸಮಾನಾದ ವ್ಯಕ್ತಿ. ತಮ್ಮ ಅನುಭವದ ಆಧಾರದ ಮೇಲೆ ನೀಡುವ ಸಲಹೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ನಮ್ಮಲ್ಲಿ 80 ಶಾಸಕರು ಇದ್ದಾರೆ ಎಂಬುದನ್ನು ಯಾರೂ ಮರೆಯಬಾರದು ಎಂದು ಜೆಡಿಎಸ್‍ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

Facebook Comments

Sri Raghav

Admin