ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ಬಜೆಟ್ ಭಿನ್ನಾಭಿಪ್ರಾಯ ಇತ್ಯರ್ಥ : ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಬೆಂಗಳೂರು, ಜೂ.25- ಹೊಸ ಬಜೆಟ್ ಬಗ್ಗೆ ಭಿನ್ನಾಭಿಪ್ರಾಯಗಳಿವೆ ಎಂಬುದು ಮಾಧ್ಯಮದ ಕಲ್ಪನೆ. ಕೆಲವು ವಿಷಯಗಳನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ಇತ್ಯರ್ಥ ಮಾಡಿಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರ ಮಾತುಗಳನ್ನು ನಯವಾಗಿಯೇ ತಳ್ಳಿಹಾಕಿದರು.

ಬಜೆಟ್ ಬೇಡ ಎಂದು ಸಿದ್ದರಾಮಯ್ಯ ಹೇಳಿರುವುದು ತಪ್ಪು ಗ್ರಹಿಕೆ. ಎಲ್ಲರಿಗೂ ತಮ್ಮದೇ ಆದ ಅಭಿಪ್ರಾಯಗಳಿರುತ್ತವೆ. ಎಲ್ಲರ ಅಭಿಪ್ರಾಯಗಳು ಒಂದೇ ಆಗಿರಬೇಕು ಎಂದೇನಿಲ್ಲ . ಈ ಕುರಿತು ಹೆಚ್ಚಿನ ವಿವರಗಳನ್ನು ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡುತ್ತೇವೆ ಎಂದರು. ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿಲ್ಲ. ಯಾವಾಗಬೇಕಾದರೂ ವಿಸ್ತರಣೆಯಾಗಬಹುದು. ನಿನ್ನೆ ನಾನು ಧರ್ಮಸ್ಥಳಕ್ಕೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಆರೋಗ್ಯದ ದೃಷ್ಟಿಯಿಂದ ಅವರನ್ನು ಮಾತನಾಡಿಸಲು ಹೋಗಿದ್ದೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ ಮಾಡಿದ್ದೇನೆ. ಚಿಕಿತ್ಸೆ ಮುಗಿಸಿ ಅವರು ಶೀಘ್ರವೇ ವಾಪಸ್ ಬರುತ್ತಾರೆ. ಅನಂತರ ಸಮನ್ವಯ ಸಮಿತಿಯ ಸಭೆ ನಡೆಯಲಿದೆ. ಉಳಿದ ಎಲ್ಲಾ ವಿಷಯಗಳನ್ನು ಅಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

Facebook Comments

Sri Raghav

Admin