ಜು.18ರಿಂದ ಸಂಸತ್ ಮುಂಗಾರು ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

Session-Parliamne-t

ನವದೆಹಲಿ, ಜೂ.25-ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18ರಿಂದ ಆರಂಭವಾಗಿದ್ದು, ಆಗಸ್ಟ್ 10ರಂದು ಮುಕ್ತಾಯವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ(ಸಿಸಿಪಿಎ) ಈ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದರು.

ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಿಸಿಪಿಎ ಸಭೆ ಇಂದು ಸಮಾವೇಶಗೊಂಡು ಜು.18 ರಿಂದ ಆ.10ರವರೆಗೆ ಮುಂಗಾರು ಅಧಿವೇಶನ ನಡೆಸಲು ದಿನಾಂಕಗಳನ್ನು ಶಿಫಾರಸು ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಧಿಕೃತವಾಗಿ ಅಧಿವೇಶನ ಕರೆಯಲಿದ್ದಾರೆ ಎಂದು ತಿಳಿಸಿದರು. ಈ ಅಧಿವೇಶನದಲ್ಲಿ ಮಹತ್ವದ ವಿಷಯಗಳು ಚರ್ಚೆಗೆ ಬರಲಿದ್ದು, ಹಲವು ವಿಧೇಯಕಗಳಿಗೆ ಅನುಮೋದನೆ ದೊರೆಯಲಿದೆ ಎಂದು ಅನಂತಕುಮಾರ್ ಹೇಳಿದರು.

Facebook Comments

Sri Raghav

Admin