ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Horatti-01

ಬೆಂಗಳೂರು,ಜೂ.25- ವಿಧಾನ ಪರಿಷತ್‍ಗೆ ಪದವೀಧರ, ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದವರು ಇಂದು ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ, ಬಿಜೆಪಿಯ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಈ ಮೂವರು ಆಯ್ಕೆಯಾಗಿದ್ದರು.

Facebook Comments

Sri Raghav

Admin