ವಾಜಪೇಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi--01
ನವದೆಹಲಿ, ಜೂ.25 (ಪಿಟಿಐ)- ಅನಾರೋಗ್ಯದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಚಿಕಿತ್ಸೆ ಪಡೆಯುತ್ತಿರುವ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್) ಆಸ್ಪತ್ರೆಗೆ ನಿನ್ನೆ ರಾತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ರಾತ್ರಿ 9.05ಕ್ಕೆ ಏಮ್ಸ್‍ಗೆ ಭೇಟಿ ನೀಡಿದ ಮೋದಿ 20 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದು, ಅಟಲ್ ಅವರ ಆರೋಗ್ಯ ವಿಚಾರಿಸಿ, ಅವರ ಸ್ಥಿತಿ ಬಗ್ಗೆ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಮೂತ್ರಪಿಂಡ, ಎದೆ ಮತ್ತು ಮೂತ್ರ ನಾಳ ಸೋಂಕು ಹಿನ್ನೆಲೆಯಲ್ಲಿ ಜೂನ್ 11ರಂದು 93 ವರ್ಷದ ಅಟಲ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin