ನ್ಯಾಯಾಂಗ ನಿಂದನೆಯಾಗಬಾರದೆಂದು ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

 

Basavaraj-Bommai
ಬೆಂಗಳೂರು, ಜೂ.26- ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆಯೇ ಹೊರತು ಇದರಲ್ಲಿ ಕೇಂದ್ರದ ಪಾತ್ರ ಏನೂ ಇಲ್ಲ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರ್ಕಾರ ಪ್ರಾಧಿಕಾರ ರಚನೆ ಮಾಡಿದೆ. ಇಲ್ಲದಿದ್ದರೆ ನ್ಯಾಯಾಂಗ ನಿಂದನೆಗೆ ತುತ್ತಾಗಬೇಕಿತ್ತು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದ್ದಂತೆ ರಾಜ್ಯ ಸರ್ಕಾರ ತಕರಾರು ಅರ್ಜಿಯನ್ನು ಸಲ್ಲಿಸಬಹುದಿತ್ತು. ಇಲ್ಲಿಯ ತನಕ ಸುಮ್ಮನಿದ್ದು ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದು ಅವರು ಮನವಿ ಮಾಡಿದರು.

ಅಧಿಸೂಚನೆ ಹೊರಡಿಸುತ್ತಿದ್ದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದ ವಿರೋಧವಿದೆ ಎಂದು ಕೇಂದ್ರಕ್ಕೆ ಇಲ್ಲವೆ ನ್ಯಾಯಾಲಯದಲ್ಲಿ ಅರ್ಜಿ ಹಾಕಬಹುದಿತ್ತು. ಎಲ್ಲವೂ ಮುಗಿದ ಬಳಿಕ ಕೇಂದ್ರದ ಮೇಲೆ ಬೆರಳು ತೋರಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ಸಂಪೂರ್ಣ ಮಾಹಿತಿ ಪಡೆದು ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಮೇಲೆ ಟೀಕೆ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಮಾಹಿತಿ ಪಡೆಯದೆ ಆಧಾರ ರಹಿತ ಆರೋಪ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

 

Facebook Comments

Sri Raghav

Admin