ಮಾಜಿ ಸಿಎಂ ಸಿದ್ದರಾಮಯ್ಯ ಪರ ಶಾಸಕ ಸುಧಾಕರ್ ಬ್ಯಾಟಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

K-Sudhakar--01

ಚಿಕ್ಕಬಳ್ಳಾಪುರ, ಜೂ.26- ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗುವ ರೀತಿಯಲ್ಲಿ ಯಾರಾದರೂ ನಡೆದುಕೊಂಡರೆ ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಸಿಎಂಗೆ ಟಾಂಗ್ ನಿಡಿದ್ದಾರೆ. ತಾಲೂಕಿನ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ 1001 ತೆಂಗಿನಕಾಯಿ ಒಡೆಯುವ ಕಾರ್ಯಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸಲು ಕಾರಣರಾದ ಮತದಾರರಿಗೆ, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಸ್ತುತ ಮಳೆ ಪ್ರಾರಂಭವಾಗಿದೆ. ರೈತರ ಎಲ್ಲಾ ಸಂಕಷ್ಟಗಳು ದೂರವಾಗಲೀ, ಸಮ್ಮಿಶ್ರ ಸರ್ಕಾರಕ್ಕೆ ಜಾಸ್ತಿ ಆಯಸ್ಸು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಕಳೆದ 5 ವರ್ಷಗಳಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕೊಟ್ಟ ಸಮ್ಮಿಶ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಅಲ್ಲದೆ ಹೊಸ ಕಾರ್ಯಕ್ರಮಗಳನ್ನು ಕೊಡಬೇಕು. ಕಾಂಗ್ರೆಸ್ ಪಕ್ಷ 80 ಸ್ಥಾನ ಗಳಿಸಲು ಶ್ರಮಿಸಿದ ಸಿದ್ಧರಾಮಯ್ಯ ಅವರನ್ನು ಕಡೆಗಣಿಸಬಾರದು ಎಂದು ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುವುದರಿಂದ ಜೆಡಿಎಸ್ ನಾಯಕರಲ್ಲಿ ಸಹಜವಾಗಿ ಆತ್ಮಸ್ಥೈರ್ಯ ಹೆಚ್ಚಾಗಿದೆ. ಆದರೆ ತಮ್ಮ ಪಕ್ಷದ ಸಿಎಂ ಇಲ್ಲದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಲು ಕಾರಣವಾಗಿದೆ. ಆದಾಗ್ಯೂ ಎಲ್ಲೆ ಆಗಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗುವ ರೀತಿಯಲ್ಲಿ ಯಾರಾದರೂ ನಡೆದುಕೊಂಡರೆ ಸಮ್ಮಿಶ್ರ ಸರ್ಕಾರ ತಲೆದಂಡ ತೆರುವುದು ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದರು. ಹಾಪ್‍ಕಾಮ್ಸ್‍ನ ಮಾಜಿ ಅಧ್ಯಕ್ಷ ಶ್ರೀನಿವಾಸ, ಯಲುವಳ್ಳಿ ರಮೇಶ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Facebook Comments

Sri Raghav

Admin